ಮನೆ ರಾಷ್ಟ್ರೀಯ ಪಾಟ್ನಾ: ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರ ಬಂಧನ

ಪಾಟ್ನಾ: ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರ ಬಂಧನ

0

ಪಾಟ್ನಾ(Patna): ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ಪಾಟ್ನಾದಲ್ಲಿ ಶಂಕಿತ ಭಯೋತ್ಪಾದಕರ ತಂಡವನ್ನು ಭೇದಿಸಲಾಗಿದ್ದು, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

ಮೊಹಮ್ಮದ್  ಜಲಾವುದ್ದೀನ್ ಮತ್ತು ಅತ್ತರ್ ಪರ್ವೇಜ್ ಬಂಧಿತ ಉಗ್ರರು.

ಪೊಲೀಸರ ದಾಳಿಯ ವೇಳೆ 8 ಪುಟಗಳ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ.

ಬಂಧಿತರಾಗಿರುವ ಜಲಾವುದ್ದೀನ್ ಜಾರ್ಖಂಡ್​ನ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದಾರೆ.

ಜುಲೈ 12ರಂದು ಬಿಹಾರಕ್ಕೆ ಮೋದಿ ಭೇಟಿ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜುಲೈ 6, 7ರಂದು ಸಂಚು ರೂಪಿಸಲು ಸಭೆ ಕರೆದಿದ್ದರು. ಬಂಧಿತ ಶಂಕಿತರಿಂದ ಪಿಎಫ್​​ಐಗೆ ಸೇರಿದ 25 ಕರಪತ್ರ ವಶಕ್ಕೆ ಪಡೆಯಲಾಗಿದೆ. ಬಿಹಾರಕ್ಕೆ ಪ್ರಧಾನಿ ಮೋದಿ ಅವರ ಭೇಟಿಗೆ 15 ದಿನಗಳ ಮೊದಲು ಶಂಕಿತ ಭಯೋತ್ಪಾದಕರಿಗೆ ಫುಲ್ವಾರಿ ಷರೀಫ್‌ನಲ್ಲಿ ತರಬೇತಿ ನೀಡಲಾಗುತ್ತಿತ್ತು. ಅವರು ಜುಲೈ 6 ಮತ್ತು 7ರಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಲು ಸಂಚು ರೂಪಿಸಲು ಸಭೆಗಳನ್ನು ನಡೆಸಿದ್ದರು. ಶಂಕಿತ ಉಗ್ರರ ಫುಲ್ವಾರಿ ಷರೀಫ್ ಕಚೇರಿ ಮೇಲೆ ಬಿಹಾರ ಪೊಲೀಸರು ದಾಳಿ ನಡೆಸಿದ್ದಾರೆ.

ಜಾರ್ಖಂಡ್​ನ ನಿವೃತ್ತ ಪೊಲೀಸ್ ಅಧಿಕಾರಿ ಜಲಾಲುದ್ದೀನ್ ಪಾಟ್ನಾದಲ್ಲಿರುವ ತನ್ನ ಮನೆಯಲ್ಲಿ ಉಗ್ರರಿಗೆ ಶಸ್ತ್ರಾಸ್ತ್ರಗಳ ಮತ್ತು ಮಾರ್ಷಲ್ ಆರ್ಟ್ಸ್​​ನ ತರಬೇತಿ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಆ ಉಗ್ರರಿಂದ 25 ಪಿಎಫ್‌ಐ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ಭಯೋತ್ಪಾದಕ ಘಟಕ ಕಾರ್ಯ ನಿರ್ವಹಿಸುತ್ತಿದೆ ಎಂದು ಗುಪ್ತಚರ ದಳಕ್ಕೆ ಮಾಹಿತಿ ಸಿಕ್ಕಿತ್ತು. ಹೀಗಾಗಿ, ಪೊಲೀಸರು ಮತ್ತು ಕೇಂದ್ರ ಏಜೆನ್ಸಿಗಳು ಜುಲೈ 11ರಂದು ನಯಾ ಟೋಲಾ ಪ್ರದೇಶದ ಮೇಲೆ ದಾಳಿ ನಡೆಸಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಈ ಸ್ಥಳಕ್ಕೆ ಭೇಟಿ ನೀಡಿದ್ದ ಹೆಚ್ಚಿನ ಯುವಕರು ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಇತರ ಹಲವು ರಾಜ್ಯಗಳಿಂದ ಭಯೋತ್ಪಾದಕ ಸಂಚು ರೂಪಿಸಲು ತರಬೇತಿ ಪಡೆಯಲು ಬರುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.