ಮನೆ ರಾಜ್ಯ ರಾಜ್ಯದಲ್ಲಿ 1209 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1209 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇಂದು 1209 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,83,025ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40084ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1072 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,36,160ಕ್ಕೆ ಏರಿಕೆಯಾಗಿದೆ. ಇನ್ನು 6739 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1068 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,16,541ಕ್ಕೆ ಏರಿಕೆಯಾಗಿದೆ.