ಮನೆ ಶಿಕ್ಷಣ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಎನ್.ಐ.ಆರ್.​ಎಫ್​​ ನಿಂದ 33ನೇ ರ್ಯಾಂಕ್

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಎನ್.ಐ.ಆರ್.​ಎಫ್​​ ನಿಂದ 33ನೇ ರ್ಯಾಂಕ್

0

ಮೈಸೂರು(Mysuru):  ಕೇಂದ್ರ ಶಿಕ್ಷಣ ಇಲಾಖೆಯು ಇಂದು ಪ್ರಕಟಿಸಿರುವ 2022ನೇ ಸಾಲಿನ ರಾಷ್ಟ್ರೀಯ ರ‍್ಯಾಂಕಿಂಗ್ ಫ್ರೇವರ್ಕ್ (ಎನ್‌ಐಆರ್‌ಎಫ್‌) ನಲ್ಲಿ ಮೈಸೂರು ವಿಶ್ವವಿದ್ಯಾನಿಲಯ 33ನೇ ರ್ಯಾಂಕ್ ಪಡೆದುಕೊಂಡಿದೆ.

ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳ ಶ್ರೇಯಾಂಕ ಪಟ್ಟಿಯನ್ನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಬಿಡುಗಡೆ ಮಾಡಿದರು. ಕಳೆದ ಬಾರಿ ಮೈಸೂರು ವಿವಿ 27 ನೇ ಸ್ಥಾನ ಪಡೆದಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಮೈಸೂರು ವಿಶ್ವವಿದ್ಯಾಲಯವು ತನ್ನ ಉತ್ತಮ ಸಾಧನೆಯಿಂದಾಗಿ ಈ ಸಾಲಿನಲ್ಲಿ ಕರ್ನಾಟಕ ರಾಜ್ಯದ ವಿಶ್ವವಿದ್ಯಾನಿಲಯಗಳ ಪೈಕಿ ಅಗ್ರಸ್ಥಾನ ಪಡೆದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

2015ರಿ೦ದಲೂ ಎನ್.ಐ.ಆರ್.ಎಫ್ ಮುಖಾಂತರ ಉನ್ನತ ಶಿಕ್ಷಣ ಸಂಸ್ಥೆಗಳ ಮೌಲೀಕರಣವನ್ನು ಮಾಡಲಾಗುತ್ತಿದೆ. ‘ಒಟ್ಟಾರೆ ವರ್ಗ’, ‘ವಿಶ್ವವಿದ್ಯಾನಿಲಯಗಳ ವರ್ಗ’, ‘ಎಂಜಿನಿಯರಿಂಗ್ ಸಂಸ್ಥೆಗಳ ವರ್ಗ’ ಸೇರಿದಂತೆ ಹತ್ತು ವಿವಿಧ ವರ್ಗಗಳಡಿ ಮೌಲ್ಯಾಂಕವನ್ನು ನಡೆಸಲಾಗುತ್ತದೆ. ಮೈಸೂರು ವಿಶ್ವವಿದ್ಯಾನಿಲಯವು ಈ ಬಾರಿ ಮೊದಲೆರಡು ವರ್ಗಗಳ ರ್ಯಾಂಕಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಿತ್ತು. ಕಾಯಂ ಆಧ್ಯಾಪಕರುಗಳ ಕೊರತೆ ಹಾಗೂ ಇನ್ನಿತರ ಮಿತಿಗಳ ನಡುವೆಯೂ ಮೈಸೂರು ವಿಶ್ವವಿದ್ಯಾನಿಲಯವು 33ನೇ ಸ್ಥಾನ ಪಡೆದಿರುವುದು ಶ್ಲಾಘನೀಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಯಶಸ್ಸಿಗೆ ಕಾರಣಕರ್ತರಾದ ಸಿಂಡಿಕೇಟ್ ಹಾಗೂ ಶೈಕ್ಷಣಿಕ ಮಂಡಳಿಯ ಸದಸ್ಯರು, ಅಧ್ಯಾಪಕ ಹಾಗೂ ಆಧ್ಯಾಪಕೇತರ ವರ್ಗದವರು, ಅಧಿಕಾರಿಗಳು, ಸಂಶೋಧಕರು, ವಿದ್ಯಾರ್ಥಿಗಳು, ಪೋಷಕರನ್ನು ಈ ಸ೦ದರ್ಭದಲ್ಲಿ ಅಭಿನಂದಿಸುತ್ತೇನೆ. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವಂತಾಗಲೆಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.