ಮನೆ ಅಪರಾಧ ಪತ್ನಿಯ ಶಿರಚ್ಛೇದ ಮಾಡಿ, ಆಕೆಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ವ್ಯಕ್ತಿ 

ಪತ್ನಿಯ ಶಿರಚ್ಛೇದ ಮಾಡಿ, ಆಕೆಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ವ್ಯಕ್ತಿ 

0

ಒಡಿಶಾ(Odisha): ಪತ್ನಿಯ ಶಿರಚ್ಛೇದ ಮಾಡಿ, ಆಕೆಯ ರುಂಡದೊಂದಿಗೆ ವ್ಯಕ್ತಿಯೊಬ್ಬ 12 ಕಿ.ಮೀ. ನಡೆದುಕೊಂಡು ಪೊಲೀಸ್ ಠಾಣೆಗೆ ಬಂದಿರುವ ಘಟನೆ  ಒಡಿಶಾದ ಧೆಂಕನಕಲ್​ ಪ್ರದೇಶದಲ್ಲಿ ನಡೆದಿದೆ.

ಮೃತ ಮಹಿಳೆಯನ್ನ ಶುಚಲಾ ಮಾಝಿ ಎಂದು ಗುರುತಿಸಲಾಗಿದೆ.

ತುಂಡರಿಸಿದ ತಲೆಯೊಂದಿಗೆ ಸಮೀಪದ ಪೊಲೀಸ್ ಠಾಣೆಗೆ ತೆರಳುತ್ತಿರುವ ವ್ಯಕ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ.

ಕಟ್ಟಿಕೊಂಡ ಹೆಂಡತಿ ತನಗೆ ವಿಶ್ವಾಸದ್ರೋಹ ಮಾಡಿದ್ದಾಳೆಂದು ಶಂಕಿಸಿ, ಅವರ ಶಿರಚ್ಛೇದ ಮಾಡಿದ್ದಾನೆ ಎನ್ನಲಾಗಿದೆ. ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.