ಮನೆ ರಾಷ್ಟ್ರೀಯ ಮಂಕಿಪಾಕ್ಸ್‌: ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ

ಮಂಕಿಪಾಕ್ಸ್‌: ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಪ್ರಕಟ

0

ನವದೆಹಲಿ (New Delhi): ದೇಶದಲ್ಲಿ ಮಂಕಿಪಾಕ್ಸ್ ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಮಾರ್ಗಸೂಚಿ: ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ. ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬಾರದು. ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸಸ್ತನಿಗಳು ಸೇರಿದಂತೆ ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕದಿಂದ ದೂರವಿರಬೇಕು. ಕಾಡು ಪ್ರಾಣಿಗಳ ಮಾಂಸವನ್ನು ತಿನ್ನಬಾರದು. ಆಫ್ರಿಕಾ ಸೇರಿದಂತೆ ಇತರ ದೇಶಗಳಲ್ಲಿ ಕಾಡು ಪ್ರಾಣಿಗಳಿಂದ ಉತ್ಪಾದಿಸಿದ ಉತ್ಪನ್ನಗಳಾದ ಕ್ರೀಮ್‌ ಲೋಷನ್‍ಗಳನ್ನು ಬಳಸಬಾರದು ಮತ್ತು ತರಬಾರದು.

ಯುಎಇಯಿಂದ ಹಿಂದಿರುಗಿದ ಕೇರಳ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಇಡೀ ದೇಶದಲ್ಲೇ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದರು. ರೋಗಿಯು ಜುಲೈ 12 ರಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದರು.