ಮನೆ ಅಪರಾಧ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರ ಸಾವು

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರ ಸಾವು

0

ಚಿಂಚೋಳಿ (ಕಲಬುರಗಿ ಜಿಲ್ಲೆ): ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ತಾಲ್ಲೂಕಿನ ಶಿರೋಳ್ಳಿ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಶಿರೋಳ್ಳಿಯ ಜಗನ್ನಾಥ (42), ಮಹಿಬೂಬ್ ಅಲಿ (52) ಹಾಗೂ ಶಾದಿಪುರದ ಶ್ರೀಕಾಂತ ಎಂದು ಗುರುತಿಸಲಾಗಿದೆ.

ಅಮರ್ ಎಂಬಾತ‌ ಗಾಯಗೊಂಡಿದ್ದಾ‌ನೆ.ಗಾಯಾಳುವನ್ನು ಸೇಡಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ‌ ನಡೆಸಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.