ಮನೆ ರಾಷ್ಟ್ರೀಯ ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ನಿರ್ಮಲ್ ಸಿಂಗ್ ಕಹ್ಲೋನ್ ನಿಧನ

ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ನಿರ್ಮಲ್ ಸಿಂಗ್ ಕಹ್ಲೋನ್ ನಿಧನ

0

ಚಂಡೀಗಢ(Chandigad): ಪಂಜಾಬ್ ವಿಧಾನಸಭಾ ಮಾಜಿ ಸ್ಪೀಕರ್ ನಿರ್ಮಲ್ ಸಿಂಗ್ ಕಹ್ಲೋನ್(79) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಪಂಜಾಬ್‍ನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು, ಅಕಾಲಿದಳದ ನಾಯಕ ಮತ್ತು ಮಾಜಿ ಸ್ಪೀಕರ್ ನಿರ್ಮಲ್ ಸಿಂಗ್ ಕಹ್ಲೋನ್ ಅವರ ನಿಧನದ ಬಗ್ಗೆ ತಿಳಿದು ದುಃಖವಾಗಿದೆ. ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಹಿರಿಯ ಅಕಾಲಿದಳದ ನಾಯಕ ಮತ್ತು ಮಾಜಿ ಪಂಜಾಬ್ ವಿಧಾನಸಭಾ ಸ್ಪೀಕರ್ ಎಸ್.ನಿರ್ಮಲ್ ಸಿಂಗ್ ಕಹ್ಲೋನ್ ಅವರ ನಿಧನದ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ಕಹ್ಲೋನ್ ಅವರು ನೀಡುತ್ತಿದ್ದ ಸಲಹೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು ಟ್ವೀಟ್ ಮಾಡಿದ್ದಾರೆ.