ಮನೆ ರಾಷ್ಟ್ರೀಯ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಯೋಧ

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಯೋಧ

0
ಸಾಂದರ್ಭಿಕ ಚಿತ್ರ

ನವದೆಹಲಿ (New Delhi): ತಮ್ಮ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾವೇ ಗುಂಡು ಹಾರಿಸಿಕೊಂಡು ಇಂಡೊ–ಟಿಬೆಟ್‌ ಗಡಿ ಪೊಲೀಸ್‌ನ (ಐಟಿಬಿಪಿ) ಕಾನ್‌ ಸ್ಟೇಬಲ್‌ ವೊಬ್ಬರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಸೇನಾನೆಲೆಯಲ್ಲಿ ನಡೆದಿದೆ.

ಕಾನ್‌ ಸ್ಟೇಬಲ್‌ ಭೂಪೇಂದ್ರ ಸಿಂಗ್‌ ಅವರು ಈ ಕೃತ್ಯ ಎಸಗಿದ್ದಾರೆ. ಗುಂಡೇಟು ತಿಂದು ಗಾಯಗೊಂಡಿದ್ದ ಮುಖ್ಯ ಕಾನ್‌ ಸ್ಟೇಬಲ್‌ ಮತ್ತು ಇತರ ಇಬ್ಬರು ಕಾನ್‌ ಸ್ಟೇಬಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಭೂಪೇಂದ್ರ ಅವರು ತಮ್ಮ ಐಎನ್‌ಎಸ್‌ಎಎಸ್‌ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೂ ಮೊದಲು ಕಾನ್‌ ಸ್ಟೇಬಲ್‌ಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎಂದು ಕೆಲವರು ಮಾಹಿತಿ ನೀಡಿದ್ದಾರೆ. ಆದರೆ, ಈ ಘಟನೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ಈ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.