ಮನೆ ಕ್ರೀಡೆ ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಪಿ.ವಿ.ಸಿಂಧು ಚಾಂಪಿಯನ್‌

ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಪಿ.ವಿ.ಸಿಂಧು ಚಾಂಪಿಯನ್‌

0

ಸಿಂಗಪುರ (Singapore ): ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.

ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ ಪಂದ್ಯದಲ್ಲಿ ಚೀನಾದ ವಾಂಗ್‌ ಜಿ ಯಿ ವಿರುದ್ಧ ಜಯ ಸಾಧಿಸಿದ್ದಾರೆ. ಭಾನುವಾರ ಇಲ್ಲಿ ನಡೆದ ಹಣಾಹಣಿಯಲ್ಲಿ ಸಿಂಧು 21-9, 11-21, 21-15 ರಿಂದ ಚೀನಾದ ವಾಂಗ್‌ ಜಿ ಯಿ ಅವರನ್ನು ಮಣಿಸಿದರು.

ಶನಿವಾರ ನಡೆದಿದ್ದ ನಾಲ್ಕರ ಘಟ್ಟದ ಹಣಾಹಣಿಯಲ್ಲಿ ಸಿಂಧು 21-15, 21-7ರಿಂದ ಜಪಾನ್‌ನ ಸಿನಾ ಕವಾಕಮಿ ಅವರನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟಿದ್ದರು.