ಮನೆ ರಾಷ್ಟ್ರೀಯ ರಾಷ್ಟ್ರಪತಿ ಚುನಾವಣೆ: ಪ್ರಧಾನಿ ನರೇಂದ್ರ ಮೋದಿ ಮತ ಚಲಾವಣೆ

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ನರೇಂದ್ರ ಮೋದಿ ಮತ ಚಲಾವಣೆ

0

ನವದೆಹಲಿ(New Delhi): ನೂತನ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ದು, ಸಂಸತ್ತಿನ ಆವರಣದಲ್ಲಿರುವ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.

ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಇರಿಸಲಾಗಿರುವ ಮತಗಟ್ಟೆಗಳಲ್ಲಿ ಸೋಮವಾರ ಬೆಳಗ್ಗೆ 10 ರಿಂದ ಮತದಾನ ಆರಂಭವಾಗಿದೆ.

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರು ಎನ್‌ಡಿಎಯ ಅಭ್ಯರ್ಥಿಯಾಗಿದ್ದಾರೆ. ‌ವಿರೋಧ ಪಕ್ಷಗಳ ಬೆಂಬಲದೊಂದಿಗೆ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದಾರೆ. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಈ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದಾರೆ.

ಸಂಸತ್ತಿನ ಚುನಾಯಿತ ಸದಸ್ಯರು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಎಲ್ಲಾ ರಾಜ್ಯ ವಿಧಾನಸಭೆ ಸದಸ್ಯರು ರಾಷ್ಟ್ರಪತಿ ಆಯ್ಕೆಗೆ ಮತ ಚಲಾಯಿಸುತ್ತಿದ್ದಾರೆ.

ಸಂಸತ್‌ನ 776 ಸದಸ್ಯರು ಮತ್ತು 4,033 ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ಮತಗಳ ಒಟ್ಟು ಮೌಲ್ಯ 10,86,431 ಆಗಿದ್ದು, ಇದರಲ್ಲಿ ಶಾಸಕರ ಮತಗಳು 5,43,231 ಮತ್ತು ಸಂಸದರ ಮತಗಳು 5,43,200 ಆಗಿದೆ.

ಜುಲೈ 21ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ …ರಾಷ್ಟ್ರಪತಿ ಚುನಾವಣೆ: ಮೊದಲು ಮತಚಲಾಯಿಸಿದ ಗೋವಿಂದ ಕಾರಜೋಳ

ಇದನ್ನೂ ಓದಿ …ರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ