ಮನೆ ಕ್ರೀಡೆ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಲ್‌ರೌಂಡರ್ ಬೆನ್ ಸ್ಟೋಕ್ಸ್

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಲ್‌ರೌಂಡರ್ ಬೆನ್ ಸ್ಟೋಕ್ಸ್

0

ಲಂಡನ್ (London): ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಬಳಿಕ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದಾಗಿ ಇಂಗ್ಲೆಂಡ್ ಕ್ರಿಕೆಟಿಗ, ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಘೋಷಿಸಿದ್ದಾರೆ.
ಇದು ಅತ್ಯಂತ ಕಠಿಣ ನಿರ್ಧಾರವಾಗಿತ್ತು ಎಂದು ಸ್ಟೋಕ್ಸ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಟಿ20, ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಮೂರೂ ಮಾದರಿಯಲ್ಲಿ ಆಡುವುದು ಈಗ ಸಮರ್ಥನೀಯವಲ್ಲ. ಈ ನಿರ್ಧಾರ ಕೈಗೊಳ್ಳುವುದು ಅತ್ಯಂತ ಕಠಿಣವಾಗಿತ್ತು. ಸತ್ಯವೇನೆಂದರೆ, ನಾನು ಇನ್ನು ಮುಂದೆ ಈ ಮಾದರಿಯ ಕ್ರಿಕೆಟ್‌ನಲ್ಲಿ ನನ್ನ ಸಹೋದ್ಯೋಗಿಗಳಿಗೆ ನೂರು ಪ್ರತಿಶತದಷ್ಟು ಆಟವನ್ನು ನೀಡಲಾರೆ’ ಎಂದು ಹೇಳಿದ್ದಾರೆ.
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಸ್ಟೋಕ್ಸ್, ಚೆಸ್ಟರ್–ಲೆ–ಸ್ಟ್ರೀಟ್‌ ಮೈದಾನದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
74 ಏಕದಿನ ಪಂದ್ಯಗಳಿಂದ ಅವರು, 2,919 ರನ್ ಕಲೆ ಹಾಕಿದ್ದಾರೆ.
ಈ ನಿರ್ಧಾರ ಕೈಗೊಳ್ಳುವುದು ಅತ್ಯಂತ ಕಠಿಣವಾಗಿತ್ತು. ಸತ್ಯವೇನೆಂದರೆ, ನಾನು ಇನ್ನುಮುಂದೆ ಈ ಮಾದರಿಯ ಕ್ರಿಕೆಟ್‌ನಲ್ಲಿ ನನ್ನ ಸಹೋದ್ಯೋಗಿಗಳಿಗೆ ನೂರು ಪ್ರತಿಶತದಷ್ಟು ಆಟವನ್ನು ನೀಡಲಾರೆ ಎಂದು ಹೇಳಿದ್ದಾರೆ.
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯಲ್ಲಿ ಪುರುಷರ ಕ್ರಿಕೆಟ್‌ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ರಾಬ್ ಕೀ ಅವರು ಸ್ಟೋಕ್ಸ್‌ ಅವರ ಆಟವನ್ನು ಕೊಂಡಾಡಿದ್ದಾರೆ.
‘ಬೆನ್ ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ವೃತ್ತಿ ಜೀವನ ಕಂಡಿದ್ದಾರೆ. 2019ರ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್‌ ಕ್ರಿಕೆಟ್ ಫೈನಲ್‌ನಲ್ಲಿ ಅವರ ಪಂದ್ಯ-ವಿಜೇತ ಪ್ರದರ್ಶನ ಉತ್ತುಂಗದಲ್ಲಿತ್ತು’ ಎಂದು ಬರೆದುಕೊಂಡಿದ್ದಾರೆ.