ಮನೆ ರಾಜ್ಯ ರಾಯಚೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

ರಾಯಚೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

0

ರಾಯಚೂರು (Raichur): ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶ ಮೂಲದ ದೀಪ್(35), ಪೂರ್ಣಿಮಾ(30), ಜಶಿನ್(12) ಹಾಗೂ ಮಾಹಿನ್(7) ಎಂದು ಗುರುತಿಸಲಾಗಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಸಮೀಪದ ಬಾಲಯ್ಯ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಸಿಂಧನೂರು ಮಾರ್ಗವಾಗಿ ಹೈದ್ರಾಬಾದ್ ಗೆ ತೆರಳುತ್ತಿದ್ದ ಕುಟುಂಬ ದುರಂತ ಸಾವಿಗೀಡಾಗಿದೆ. ಲಾರಿ ಚಾಲಕ ಘಟನೆ ಬಳಿಕ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.