ಮನೆ ರಾಜ್ಯ ಕೆಆರ್‍’ಎಸ್ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ ಅರ್ಪಣೆ

ಕೆಆರ್‍’ಎಸ್ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ ಅರ್ಪಣೆ

0

ಮಂಡ್ಯ(Mandya): ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಅರ್ಪಿಸಿದರು.

ಬಾಗಿನ ಅರ್ಪಸಿದ ನಂತರ ಜಲಾಶಯದ ತಟದಲ್ಲಿರುವ ಕಾವೇರಿ ಪ್ರತಿಮೆಗೆ ಬೊಮ್ಮಾಯಿ ಅವರು ಪತ್ನಿ ಸಮೇತ ಪೂಜೆ ಸಲ್ಲಿಸಿದರು‌.ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ, ರೇಷ್ಮೆ, ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಇದ್ದರು.

ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಅಬಕಾರಿ ಹಾಗೂ ಮಂಡ್ಯ ಜಿಲ್ಲಾ  ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಜನಸಬಲೀಕರಣ ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣ ಗೌಡ, ಸಹಕಾರ ಇಲಾಖೆ ಸಚಿವರಾದ ಎಸ್.ಟಿ ಸೋಮಶೇಖರ್, ವಿಧಾನಪರಿಷತ್ ಸದಸ್ಯರುಗಳಾದ , ಮಧು ಜಿ.ಮಾದೇಗೌಡ,ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕರುಗಳಾದ ಎಂ.ಶ್ರೀನಿವಾಸ್ ,ಡಿ.ಸಿ ತಮ್ಮಣ್ಣ, ಸಿ.ಎಸ್ ಪುಟ್ಟರಾಜು, ಕೆ.ಅನ್ನದಾನಿ,ರವೀಂದ್ರ ಶ್ರೀಕಂಠಯ್ಯ,ಎಲ್.ನಾಗೇಂದ್ರ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು ಸಿದ್ದಲಿಂಗಸ್ವಾಮಿ,ಕೃಷ್ಣರಾಜಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ನರಸಿಂಹ, ಮೈಸೂರು ಮೇಯರ್ ಸುನಂದ ಪಾಲನೇತ್ರ, ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಅಶ್ವತಿ,ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಉಪಸ್ಥಿತರಿದ್ದರು.