ಮನೆ ರಾಜಕೀಯ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

ಎರಡು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

0

ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 25 ಮತ್ತು 26ರಂದು ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದು, ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 25ರಂದು (ಸೋಮವಾರ) ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ವಿವಿಧ ಇಲಾಖೆಗಳ ನಿಯೋಗಗಳೊಂದಿಗೆ ದೆಹಲಿಗೆ ತೆರಳುತ್ತಿದ್ದೇನೆ. ಪಕ್ಷದ ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ನಿಯೋಗದ ನೇತೃತ್ವವನ್ನೂ ನಾನೇ ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಬೊಮ್ಮಾಯಿ ಸಂಪುಟದಲ್ಲಿ ಒಟ್ಟು 5 ಸಚಿವ ಸ್ಥಾನಗಳು ಖಾಲಿ ಇದ್ದು, ವಿಸ್ತರಣೆಗೆ ಹಸಿರು ನಿಶಾನೆ ಸಿಕ್ಕಿದರೆ ಶೀಘ್ರವೇ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಆಗಲಿದೆ ಮೂಲಗಳು ಹೇಳಿವೆ.