ಮನೆ ಮನರಂಜನೆ ಲೈಗರ್ ಸಿನಿಮಾ ಟ್ರೈಲರ್ ರಿಲೀಸ್

ಲೈಗರ್ ಸಿನಿಮಾ ಟ್ರೈಲರ್ ರಿಲೀಸ್

0

ಹೈದರಾಬಾದ್ (Hyderabad): ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾ ಟ್ರೈಲರ್‌ ಇಂದು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸಿದೆ.
ತೆಲುಗು, ಕನ್ನಡ, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಟ್ರೈಲರ್ ಬಿಡುಗಡೆಯಾಗಿದೆ.
‘ಲೈಗರ್’ ಚಿತ್ರದಲ್ಲಿ ಬಾಕ್ಸಿಂಗ್ ಪಟುವಾಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಹಾಗೂ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಜೊತೆ ವಿಜಯ್‌ ನಟಿಸಿದ್ದಾರೆ. ಅದರಲ್ಲೂ ಮೈಕ್ ಟೈಸನ್ ಪಾತ್ರ ಸಿನಿಪ್ರಿಯರಿಗೆ ಭಾರಿ ಕುತೂಹಲ ಮೂಡಿಸಿದೆ.
‘ಪೋಕಿರಿ’ ಖ್ಯಾತಿಯ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.
ಈ ಚಿತ್ರ ಆಗಸ್ಟ್ 25ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಚಿತ್ರತಂಡ ಮಾಹಿತಿ ನೀಡಿದೆ.