ಮನೆ ಅಂತಾರಾಷ್ಟ್ರೀಯ ಶ್ರೀಲಂಕಾದ ನೂತನ ಪ್ರಧಾನಿಯಾಗಿ ದಿನೇಶ್ ಗುಣವರ್ಧನೆ ಪ್ರಮಾಣ ವಚನ ಸ್ವೀಕಾರ

ಶ್ರೀಲಂಕಾದ ನೂತನ ಪ್ರಧಾನಿಯಾಗಿ ದಿನೇಶ್ ಗುಣವರ್ಧನೆ ಪ್ರಮಾಣ ವಚನ ಸ್ವೀಕಾರ

0

ಕೊಲಂಬೊ(Colombo): ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೇಶದ 8ನೇ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅಧಿಕಾರವಹಿಸಿದ ಮರುದಿನವೇ ಪ್ರಧಾನಿಯ ಆಯ್ಕೆ ನಡೆದಿದ್ದು, ಕೊಲಂಬೊದ ಫ್ಲವರ್ ರೋಡ್​ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಅವರ ಆಪ್ತರಾಗಿ ಗುರುತಿಸಿಕೊಂಡಿರುವ 73 ವರ್ಷದ ಗುಣವರ್ಧನೆ ಅವರಿಗೆ ವಿದೇಶಾಂಗ ಸಚಿವ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವವಿದೆ.

ಸಿಂಗಾಪುರಕ್ಕೆ ಪಲಾಯನ ಮಾಡಿರುವ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ರಾಜೀನಾಮೆಯಿಂದ ಶ್ರೀಲಂಕಾದ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಪ್ರತಿಭಟನಾಕಾರ ಮೇಲೆ ಕಠಿಣ ಕ್ರಮ: ವಿಕ್ರಮಸಿಂಘೆ ಅಧ್ಯಕ್ಷರಾದ ನಂತರ ಇದೀಗ ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮವೂ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಅಧ್ಯಕ್ಷರ ಕಚೇರಿಯ ಹೊರಗೆ ಬೀಡುಬಿಟ್ಟಿದ್ದ ಪ್ರತಿಭಟನಾಕಾರರನ್ನು ಹೊರ ಹಾಕುವ ಕೆಲಸ ಶುರುವಾಗಿದೆ. ಹಿಂಸಾತ್ಮಕವಾಗಿ ಪ್ರತಿಭಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಕ್ರಮಸಿಂಘೆ ಆದೇಶಿಸಿದ್ದಾರೆ.