ಮನೆ ಉದ್ಯೋಗ ಕೆಇಎನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

ಕೆಇಎನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

0

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೆಇಎ ಬೆಂಗಳೂರು ಕಚೇರಿಗೆ ಕಾರ್ಯ ನಿರ್ವಹಿಸಲು ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಇಮೇಲ್​​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 30 ಆಗಿದೆ.

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಒಂದು ಅಥವಾ ಎರಡು ವರ್ಷಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗೆ ಹಿಂದಿನ ಪ್ರಕಟಣೆಗಳನುಸಾರ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳು : ಟೆಕ್ನಿಕಲ್​ ಹೆಡ್​, ಸೀನಿಯರ್​ ಪ್ರೋಗ್ರಾಮರ್​, ಪ್ರೋಗಾಮರ್​ ಟ್ರೈನಿ/ ಅಪ್ರೆಂಟಿಸ್​​
ಒಟ್ಟು ಹುದ್ದೆ: 8
ಕಾರ್ಯ ನಿರ್ವಹಣೆ ಸ್ಥಳ: ಬೆಂಗಳೂರು
ವೇತನ: 1,00,000- 25,000 ರೂ ಮಾಸಿಕ

ಅರ್ಜಿ ಸಲ್ಲಿಕೆ: ಇ ಮೇಲ್​ ಮುಖಾಂತರ
ಇಮೇಲ್ವಿಳಾಸ: keaoppertunities@gmail.com
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 22 ಜುಲೈ 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: 30 ಜುಲೈ 2022

ಅಧಿಕೃತ ವೆಬ್​ಸೈಟ್​:  kea.kar.nic.in

ಅರ್ಜಿ ಸಲ್ಲಿಕೆ ವಿಧಾನ

ಸಂಸ್ಥೆಯ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.