ಮನೆ ಕಾನೂನು ವಕೀಲರ ಆರೋಗ್ಯ ಸೌಲಭ್ಯಕ್ಕಾಗಿ ಮೂಲ ನಿಧಿ ಸ್ಥಾಪನೆಗೆ ರಾಜ್ಯ ಸರ್ಕಾರ ನೆರವು

ವಕೀಲರ ಆರೋಗ್ಯ ಸೌಲಭ್ಯಕ್ಕಾಗಿ ಮೂಲ ನಿಧಿ ಸ್ಥಾಪನೆಗೆ ರಾಜ್ಯ ಸರ್ಕಾರ ನೆರವು

0

ಬೆಂಗಳೂರು(Bengaluru): ವಕೀಲರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು  ಒದಗಿಸುವ ಸಲುವಾಗಿ 100 ಕೋಟಿ ರೂ. ಮೂಲ ನಿಧಿ ಸ್ಥಾಪಿಸಲು ನೆರವು ನೀಡುವ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

2022-23 ನೇ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಕೀಲರಿಗೆ ಆರೋಗ್ಯ ಸೌಲಭ್ಯ ಕಾರ್ಯಕ್ರಮ ರೂಪಿಸಲು ಅನುವಾಗುವಂತೆ ಮೂಲ ನಿಧಿ ಸ್ಥಾಪಿಸಲು ನೆರವು ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಮೂಲ ನಿಧಿ ಸ್ಥಾಪಿಸಲು ರಾಜ್ಯ ಸರ್ಕಾರವು ಶೇ.50 ರಷ್ಟು ಮೊತ್ತ ನೀಡಲಿದೆ. ಉಳಿದ ಮೊತ್ತವನ್ನು ವಕೀಲರ ಕೊಡುಗೆಯಿಂದ ಸಂಗ್ರಹಿಸಿ ಕರ್ನಾಟಕ ವಕೀಲರ ಪರಿಷತ್ ನೀಡಬೇಕು ಎಂದು ಆರ್ಥಿಕ ಇಲಾಖೆ ತಿಳಿಸಿದೆ.