ಮನೆ ಅಪರಾಧ ತಮಿಳುನಾಡಿನ ಹಾಸ್ಟೆಲ್‌ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವು

ತಮಿಳುನಾಡಿನ ಹಾಸ್ಟೆಲ್‌ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವು

0

ಚೆನ್ನೈ(Chennagi): ತಮಿಳುನಾಡಿನ ಹಾಸ್ಟೆಲ್‌ವೊಂದರಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಕಳೆದ 15 ದಿನಗಳಲ್ಲಿ ಇದು 2ನೇ ಪ್ರಕರಣವಾಗಿದೆ.

ಸೋಮವಾರ ಬೆಳಗ್ಗೆ ತಿರುವಳ್ಳೂರು ಜಿಲ್ಲೆಯ ಕಿಲಾಚೇರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿ ನಂತರ ಹಾಸ್ಟೆಲ್‌ಗೆ ಮರಳಿದ್ದರು. ವಿದ್ಯಾರ್ಥಿನಿ ಮತ್ತೆ ಶಾಲೆಗೆ ಹಿಂತಿರುಗದಿರುವುದನ್ನು ಗಮನಿಸಿದ ಶಿಕ್ಷಕರು ಹಾಸ್ಟೆಲ್‌ ವಾರ್ಡನ್‌ಗೆ ಮಾಹಿತಿ ನೀಡಿದ್ದರು.

ಹಾಸ್ಟೆಲ್‌ ಸಿಬ್ಬಂದಿ ವಿದ್ಯಾರ್ಥಿನಿ ಇದ್ದ ಕೋಣೆಯನ್ನು ತೆರೆದು ನೋಡಿದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದಳು ಎಂದು ಹಾಸ್ಟೆಲ್‌ ವಾರ್ಡನ್‌ ಹೇಳಿದ್ದಾರೆ.