ಮನೆ ರಾಜಕೀಯ ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

0

ಬೆಂಗಳೂರು(Bengaluru): ಇಂದು ನ್ಯಾಷನಲ್ ಹೆರಾಲ್ಡ್  ಹಗರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರವರ ವಿಚಾರಣೆಯನ್ನು ವಿರೋಧಿಸಿ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದಲ್ಲೂ ಸಹ ಸೋನಿಯಾ ಗಾಂಧಿ ಪರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ.  ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇಡಿ ವಿಚಾರಣೆ ನಡೆಸುವಷ್ಟು ಸಮಯ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು. ಸೋನಿಯಾ ಗಾಂಧಿ ಅವರ ವಿಚಾರಣೆ ನಿಲ್ಲಿಸುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದಾರೆ.