ಮನೆ ಅಪರಾಧ ಲಂಚಕ್ಕೆ ಬೇಡಿಕೆ: ಆರೋಗ್ಯ ಇಲಾಖೆ ಸಿಬ್ಬಂದಿ ಎಸಿಬಿ ಬಲೆಗೆ

ಲಂಚಕ್ಕೆ ಬೇಡಿಕೆ: ಆರೋಗ್ಯ ಇಲಾಖೆ ಸಿಬ್ಬಂದಿ ಎಸಿಬಿ ಬಲೆಗೆ

0

ಚಾಮರಾಜನಗರ(Chamarajanagar): ವೇತನ ಹಾಗೂ ಕೆಲಸದ ಆದೇಶ ಪತ್ರ ಕೊಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಫ್‌ಡಿಎ ಮಹೇಶ್‌ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಂಬಳ ಹಾಗೂ ಕೆಲಸದ ಆದೇಶ ಪತ್ರ ಕೊಡಿಸಲು 5 ಸಾವಿರ ರೂ.ಗಳಿಗೆ ಲಂಚ ಬೇಡಿಕೆ ಇಟ್ಟಿದ್ದಾರೆ.

ಮುಂಗಡವಾಗಿ ಕಚೇರಿಯಲ್ಲಿಂದು 3 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಸಮಯ ಕಚೇರಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.