ಮನೆ ದೇಶ ನ್ಯಾಷನಲ್ ಹೆರಾಲ್ಡ್ ಪ್ರಕರಣ: 6 ಗಂಟೆ ಸೋನಿಯಾ ಗಾಂಧಿ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಪ್ರಕರಣ: 6 ಗಂಟೆ ಸೋನಿಯಾ ಗಾಂಧಿ ವಿಚಾರಣೆ

0

ನವದೆಹಲಿ (New Delhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸುಮಾರು 6 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ ಅವರನ್ನು 6 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸೂಚಿಸಲಾಗಿದೆ.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಸೋನಿಯಾ ಗಾಂಧಿ ಆಗಮಿಸಿದರು. ಸೋನಿಯಾ ಗಾಂಧಿ ತನಿಖೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಕಾಂಗ್ರೆಸ್ ಕೇಂದ್ರ  ಕಚೇರಿ ಸುತ್ತಮುತ್ತ ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು.

ಜುಲೈ 21 ರಂದು ಇಡಿ ಎರಡು ಗಂಟೆಗಳ ಕಾಲ ಸೋನಿಯಾ ಅವರನ್ನು ಪ್ರಶ್ನಿಸಿತ್ತು. ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಅವರ ಕೋರಿಕೆಯ ಮೇರೆಗೆ ದಿನದ ವಿಚಾರಣೆಯನ್ನು ಕೊನೆಗೊಳಿಸಿತ್ತು. ಇಂದು ಎರಡನೇ ಸುತ್ತಿನ ವಿಚಾರಣೆ ನಡೆದಿದೆ.