ಬೆಂಗಳೂರು (Bengaluru): ಚಿತ್ರೀಕರಣದ ಸಂದರ್ಭದಲ್ಲಿ ನಟಿ ಸಂಯುಕ್ತ ಹೆಗ್ಡೆ ಅವರಿಗೆ ಗಂಭೀರ ಗಾಯವಾಗಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಸಂಯುಕ್ತ ಅವರು ಪಾರಾಗಿದ್ದಾರೆ.
‘ಕ್ರೀಂ’ ಸಿನಿಮಾದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಸಾಹಸ ಸನ್ನಿವೇಶಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ.
ಪರಿಣಾಮ, ಸಂಯುಕ್ತ ಹೆಗ್ಡೆ ಅವರ ಮುಖ ಮತ್ತು ಕಾಲಿಗೆ ಪೆಟ್ಟಾಗಿದೆ. ಕೂಡಲೆ ಸಂಯುಕ್ತ ಹೆಗ್ಡೆ ಅವರನ್ನು ಕಣ್ವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಫೈಟ್ ಮಾಸ್ಟರ್ ಪ್ರಭು ಅವರ ಸಮ್ಮುಖದಲ್ಲಿ ಈ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ಅವರು ಡ್ಯೂಪ್ ಬಳಸುವಂತೆ ಸಲಹೆ ನೀಡಿದ್ದರು. ಅದಕ್ಕೆ ಕೆಲವರು ಒಪ್ಪಿರಲಿಲ್ಲ ಎನ್ನಲಾಗಿದೆ.