ಮನೆ ರಾಜ್ಯ ರಾಜ್ಯದಲ್ಲಿ 1624 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 1624 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,094ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1,647 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,50,794ಕ್ಕೆ ಏರಿಕೆಯಾಗಿದೆ. ಇನ್ನು 8,836 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1,176 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,30,482ಕ್ಕೆ ಏರಿಕೆಯಾಗಿದೆ.