ಮೈಸೂರು(Mysuru): ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಂಸ್ಥೆ ಹಾಗೂ ಶ್ರೀ ಪ್ರಸನ್ನ ಸಾಯಿ ಡಯಾಗ್ನೋಸ್ಟಿಕ್ & ಹೆಲ್ತ್ ಕೇರ್ ಸೆಂಟರ್ ಹಾಗೂ ದಿ ರಿವೈವ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜು.31 ರಂದು ಹೊಸಹುಂಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದೆ
ಅಂದು ಬೆಳಿಗ್ಗೆ 9.30 ರಿಂದ 2.30ರವರೆಗೆ ಶಿಬಿರ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ದೇವಲಾಪುರ ಶ್ರೀ ಗುರುಮಲ್ಲೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಜಡೇಸ್ವಾಮೀಜಿ ಪ್ರಸ್ತಾವಿಕ ನುಡಿಗಳನ್ನಾಡಲಿದ್ದು, ಶಾಸಕ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಕೆ.ಹೆಚ್.ಪ್ರಸಾದ್ ವಹಿಸಲಿದ್ದಾರೆ.
ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಚಾರ ನಿರ್ಮೂಲನಾ ಸಂಸ್ಥೆಯ ಜಿಲ್ಲಾ ಸಂಚಾಲಕ ಚಂದ್ರ. ಎಂ, ಸವಾಲ್ ಪತ್ರಿಕೆ ಮತ್ತು ಟಿ.ವಿಯ ಉಪ ಸಂಪಾದಕಿ ಚಂಪಕಲಾ, ಹೊಸಹುಂಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯೆ ಸುಶೀಲ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಮಂಜುಳ ಮಂಜುನಾಥ್ ಉಪಸ್ಥಿತರಿರಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ. 0821-2957500, 9036027754, 9241777748, 9739886223 ನ್ನು ಸಂಪರ್ಕಿಸಬಹುದಾಗಿದೆ.