ಮನೆ ರಾಷ್ಟ್ರೀಯ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೇಳುವೆ: ಅಧೀರ್‌ ರಂಜನ್‌ ಚೌಧರಿ

ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೇಳುವೆ: ಅಧೀರ್‌ ರಂಜನ್‌ ಚೌಧರಿ

0

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿರುವ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತಾವು ದ್ರೌಪದಿ ಅವರಲ್ಲಿ ವೈಯಕ್ತಿಕವಾಗಿ ಕ್ಷಮೆ ಕೇಳಲು ಸಿದ್ಧವಿರುವುದಾಗಿ ಹೇಳಿದ್ದಾರೆ.

ನಾನು ರಾಷ್ಟ್ರಪತಿಯವರನ್ನು ಅವಮಾನಿಸುವ ಬಗ್ಗೆ ಆಲೋಚನೆಯನ್ನು ಸಹ ನಾನು ಮಾಡಿಲ್ಲ. ತಪ್ಪಾಗಿದೆ. ರಾಷ್ಟ್ರಪತಿ ಅವರಿಗೆ ನೋವಾಗಿದ್ದರೆ, ವೈಯಕ್ತಿವಾಗಿ ಭೇಟಿಯಾಗಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿಯು ಈ ವಿವಾದದಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಎಳೆದು ತರುತ್ತಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವ ಚೌಧರಿ, ಅವರು ಬಯಸುವುದಾದರೆ, ನನ್ನನ್ನು ನೇಣಿಗೇರಿಸಲಿ. ನಾನು ಶಿಕ್ಷೆ ಅನುಭವಿಸಲು ಸಿದ್ಧ. ಆದರೆ, ಅವರನ್ನು (ಸೋನಿಯಾ ಗಾಂಧಿ) ಈ ವಿಚಾರದಲ್ಲಿ ಎಳೆದು ತರುತ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.