ಮನೆ ರಾಜ್ಯ ಅದ್ಧೂರಿ ದಸರಾ ಆಚರಣೆ ಸ್ವಾಗತಾರ್ಹ:  ರಾಜವಂಶಸ್ಥ ಯದುವೀರ್ ಒಡೆಯರ್

ಅದ್ಧೂರಿ ದಸರಾ ಆಚರಣೆ ಸ್ವಾಗತಾರ್ಹ:  ರಾಜವಂಶಸ್ಥ ಯದುವೀರ್ ಒಡೆಯರ್

0

ಮೈಸೂರು(Mysuru): ಎರಡು ವರ್ಷಗಳ ಬಳಿಕ ಸರ್ಕಾರ ಅದ್ಧೂರಿಯಾಗಿ ದಸರಾ ಆಚರಣೆ ಮಾಡುತ್ತಿರುವುದು ಸ್ವಾಗತಾರ್ಹ  ಎಂದು ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ನಗರದಲ್ಲಿಂದು ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಎರಡು ವರ್ಷಗಳ ಬಳಿಕ ಸಾಂಕ್ರಾಮಿಕ ಪಿಡುಗಿನಿಂದ ಹೊರ ಬಂದಿದ್ದೇವೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅದ್ಧೂರಿಯಾಗಿ ದಸರಾ ಮಾಡುತ್ತಿರುವುದು ಒಳ್ಳೆಯದು. ದಸರಾ ಆಚರಣೆಯನ್ನು ಜನರು ಆನಂದಿಸುತ್ತಾರೆ ಎಂದು ಹೇಳಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಮೈಸೂರನ್ನು ಸುವರ್ಣ ಯುಗ ಮಾಡಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ನಾಮಕರಣ ಮಾಡಿರುವುದು ಬಹಳ ಸೂಕ್ತವಾಗಿದೆ. ಇದು ನಮ್ಮೆಲರಿಗೂ ಸಂತೋಷದ ವಿಷಯ ಎಂದರು.

ಅರಮನೆಯ ಪದವಿ ಇರುವುದರಿಂದ ನಾವು ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದೇವೆ. ಅದು ನಮ್ಮ ಕರ್ತವ್ಯ. ಅದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಮಂಡ್ಯ ಜಿಲ್ಲೆಯ ಬೇಬಿಬೆಟ್ಟದ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್​ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಜಾಸ್ತಿ ಮಾತನಾಡುವುದಿಲ್ಲ ಎಂದು ತಿಳಿಸಿದರು.