ಮಂಗಳೂರು (Mangalore): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇದೀಗ ಸುರತ್ಕಲ್ ನಲ್ಲಿ ಯುವಕನ ಬರ್ಬರ ಹತ್ಯೆಯಾಗಿದೆ.
ಮಂಗಲಪೇಟೆಯ ಫಾಜಿಲ್ ಮೃತ ಯುವಕ. ಸುರತ್ಕಲ್ ನ ಎಸ್ ಕೆ ಮೊಬೈಲ್ ಅಂಗಡಿ ಬಳಿ ಘಟನೆ ನಡೆದಿದೆ. ಫಾಜಿಲ್ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸೂರತ್ಕಲ್ ನಲ್ಲಿ ಬಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.