ಮನೆ ರಾಜ್ಯ ಮಂಗಳೂರು: ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ

ಮಂಗಳೂರು: ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ

0

ಮಂಗಳೂರು(Mangalore): ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವ ವೇಳೆ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಮೋದ್ ಮುತಾಲಿಕ್ ಜಿಲ್ಲೆ ಪ್ರವೇಶಿಸಲು ನಿಷೇಧ ಹೇರಿ ಆದೇಶ ಹೊರಡಿಸಲಾಗಿತ್ತು. ಆದೇಶ ಉಲ್ಲಂಘನೆ ಮಾಡಿರುವ ಕಾರಣ ಮುತಾಲಿಕ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಕೊಲೆಯಿಂದಾಗಿ ಜಿಲ್ಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಮೋದ್ ಮುತಾಲಕ್ ಗೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸುವಂತೆ ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರಿಗೆ ಮನವಿ ಮಾಡಿದ್ದರು.

ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯದಲ್ಲಿ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಿ ಆದೇಶಿಸಿದ್ದರು.