ಮನೆ ಶಿಕ್ಷಣ ನಾಳೆ ಸಿಇಟಿ ಫಲಿತಾಂಶ ಪ್ರಕಟ

ನಾಳೆ ಸಿಇಟಿ ಫಲಿತಾಂಶ ಪ್ರಕಟ

0

ಬೆಂಗಳೂರು(Bengaluru): ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಮತ್ತು ಭವಿಷ್ಯ ತೀರ್ಮಾನಿಸುವಲ್ಲಿ ಪ್ರಮುಖ ಪಾತ್ರವಹಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(CET) ಫಲಿತಾಂಶವು ಜುಲೈ 30ರಂದು ಪ್ರಕಟಗೊಳ್ಳಲಿದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯು ಜೂನ್‌ 16, 17 ಮತ್ತು 18ರಂದು ನಡೆದಿತ್ತು.

ಸಿಬಿಎಸ್​ಇ ಮತ್ತು ಐಸಿಎಸ್​ಇ ಪಠ್ಯಕ್ರಮದಲ್ಲಿ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನೂ ಸಿಇಟಿ ರ‍್ಯಾಂಕ್‌ನಲ್ಲಿ ಪರಿಗಣಿಸಲಾಗುತ್ತದೆ. ಈಗಾಗಲೇ ಪಿಯುಸಿ ಅಥವಾ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಈ ಎಲ್ಲ ಅಂಕಗಳ ಆಧಾರದಲ್ಲಿ ಅಂತಿಮ ರ‍್ಯಾಂಕ್‌ ಪಟ್ಟಿಯನ್ನು ಸಿದ್ಧಪಡಿಸಿ ನಾಳೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.