ಮನೆ Uncategorized ಇಂದು ವಿಚಾರಣೆಗೆ ಹಾಜರಾಗುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್

ಇಂದು ವಿಚಾರಣೆಗೆ ಹಾಜರಾಗುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್

0

ಬೆಂಗಳೂರು(Bengaluru): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್‌ ಅವರು ನೋಟಿಸ್ ನೀಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ಅವರಿಗೆ ಸೂಚಿಸಲಾಗಿದೆ.

ಏನಿದು ವಿವಾದ?: ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ತನಿಖೆ ನಡೆಸುವಂತೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರು ನೀಡಿದ್ದರು. ಈ ಹಿನ್ನೆಲೆ ಸರ್ಕಾರಕ್ಕೆ ಸಮಗ್ರ ವರದಿ ನೀಡುವ ಸಲುವಾಗಿ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸೂಚಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿಚಾರದಲ್ಲಿ ಕೋಟ್ಯಂತರ ಹಣ ಅಕ್ರಮ, ಪಾರಂಪರಿಕ ಕಟ್ಟಡದಲ್ಲಿ ಅಕ್ರಮ ಈಜುಕೊಳ ನಿರ್ಮಾಣ ಆರೋಪ, ಪಾರಂಪರಿಕ ಜಿಲ್ಲಾಧಿಕಾರಿ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನೆಲಹಾಸು, ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತ ವಿಚಾರ ಸೇರಿದಂತೆ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸರ್ಕಾರ ರೋಹಿಣಿ ಸಿಂಧೂರಿಯವರಿಗೆ ಸೂಚನೆ ನೀಡಿದೆ.

ರೋಹಿಣಿ ಸಿಂಧೂರಿ ಬಳಿ‌ ಹೇಳಿಕೆ ಪಡೆದ ನಂತರ ಕಾರ್ಯದರ್ಶಿ ಡಾ.ಜೆ. ರವಿಶಂಕರ್ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ

ಪ್ರಸ್ತುತ ರೋಹಿಣಿ ಸಿಂಧೂರಿ ಅವರು ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.