ಮನೆ ಅಪರಾಧ ಫಾಜಿಲ್​ ಹತ್ಯೆ ಪ್ರಕರಣ: 21 ಮಂದಿ ಪೊಲೀಸರ​ ವಶಕ್ಕೆ

ಫಾಜಿಲ್​ ಹತ್ಯೆ ಪ್ರಕರಣ: 21 ಮಂದಿ ಪೊಲೀಸರ​ ವಶಕ್ಕೆ

0

ಮಂಗಳೂರು(Mangalore): ಸುರತ್ಕಲ್​ನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ಸಂಬಂಧ 21 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಏನಿದು ಘಟನೆ ?: ಸುರತ್ಕಲ್​ನ ಅಂಗಡಿಯೊಂದರ ಮುಂದೆ ನಿಂತಿದ್ದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್​ ಎಂಬಾತನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಲ್ಲಿ ಮೂವರು ಆರೋಪಿಗಳು ಫಾಜಿಲ್ ಮೇಲೆ ದಾಳಿ ಮಾಡಿರುವುದು ಕಂಡುಬಂದಿತ್ತು. ದುಷ್ಕರ್ಮಿಗಳು ಕಾರಿ‌ನಲ್ಲಿ ಬಂದಿರುವುದರಿಂದ ಕಾರನ್ನು ಪತ್ತೆ ಹಚ್ಚಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಈ ಪ್ರಕರಣದಲ್ಲಿ ಶನಿವಾರ ಬೆಳಗ್ಗೆವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ಅನುಮಾನದ ಆಧಾರದಲ್ಲಿ ವಿಚಾರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.