ಮನೆ ರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿಕೆಶಿ ಜಾಮೀನು ಆದೇಶ ಕಾಯ್ದಿರಿಸಿದ ಇಡಿ ಕೋರ್ಟ್

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿಕೆಶಿ ಜಾಮೀನು ಆದೇಶ ಕಾಯ್ದಿರಿಸಿದ ಇಡಿ ಕೋರ್ಟ್

0

ನವದೆಹಲಿ(New delhi): ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಇ.ಡಿ. ನ್ಯಾಯಾಲಯ ಆದೇಶವನ್ನು ಆಗಸ್ಟ್‌ 2ರವರೆಗೆ ಕಾಯ್ದಿರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಾದ –ಪ್ರತಿವಾದ ಅಲಿಸಿರುವ ನ್ಯಾಯಪೀಠ, ಆ.2ರಂದು ಮಧ್ಯಾಹ್ಬ 3ಕ್ಕೆ ಆದೇಶ ಪ್ರಕಟವಾಗಲಿದ್ದು, ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ.

ಶಿವಕುಮಾರ್‌, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್‌ ನಾರಾಯಣ್‌, ಶರ್ಮಾ ಟ್ರಾನ್ಸ್‌ಪೋರ್ಟ್‌ ಮಾಲೀಕ ಸುನೀಲ್‌ ಕುಮಾರ್‌ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್‌. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು.