ಮನೆ ರಾಜಕೀಯ ಸಿಎಂ ನಿವಾಸದ ಮುಂದೆಯೂ ಬಿಗಿ ಪೊಲೀಸ್ ಬಂದೋಬಸ್ತ್

ಸಿಎಂ ನಿವಾಸದ ಮುಂದೆಯೂ ಬಿಗಿ ಪೊಲೀಸ್ ಬಂದೋಬಸ್ತ್

0

ಬೆಂಗಳೂರು(Bengaluru): ಸಿಎಂ ನಿವಾಸದ ಮುಂದೆಯೂ ಪ್ರತಿಭಟನೆಯಾಗುವ ಸಾಧ್ಯತೆ ಇರುವುದರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಗೃಹ ಕಚೇರಿ ಕೃಷ್ಣದಲ್ಲಿ ಎರಡು ಕೆಎಸ್​​ಆರ್​​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಎಂ ಕಚೇರಿ ಕೃಷ್ಣದಲ್ಲಿ ಹೆಚ್ಚುವರಿ ಭದ್ರತೆ ಕಲ್ಪಿಸಲಾಗಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ ಹಾಕಿದ್ದು, ನಂತರ ಸಂಸದ ತೇಜಸ್ವಿ ಸೂರ್ಯ ‌ಮನೆ, ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಮಲ್ಲೇಶ್ವರಂ ಬಿಜೆಪಿ ಕಚೇರಿಗೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ತಮ್ಮ ಪಕ್ಷದ ಮೇಲೆಯೇ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳು ತಿರುಗಿಬಿದ್ದು, ಸಚಿವರ ಮನೆ ಮುಂದೆ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಿಎಂ ನಿವಾಸ, ಹಾಗೂ ರಾಜ್ಯ ಬಿಜೆಪಿ ಕಚೇರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.