ಮನೆ ದೇಶ ಆ.2 ರಿಂದ 15 ರವರೆಗೆ ಪ್ರೊಫೈಲ್ ಚಿತ್ರವಾಗಿ ‘ತಿರಂಗ’ ಬಳಸಿ: ಪ್ರಧಾನಿ ಮೋದಿ

ಆ.2 ರಿಂದ 15 ರವರೆಗೆ ಪ್ರೊಫೈಲ್ ಚಿತ್ರವಾಗಿ ‘ತಿರಂಗ’ ಬಳಸಿ: ಪ್ರಧಾನಿ ಮೋದಿ

0

ನವದೆಹಲಿ (New Delhi): ʻಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ’ ಅಂಗವಾಗಿ ಆಗಸ್ಟ್ 2 ಮತ್ತು 15 ರವರೆಗೆ ದೇಶದ ನಾಗರಿಕರು ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಪ್ರೊಫೈಲ್ ಚಿತ್ರವಾಗಿ ‘ತಿರಂಗ’ವನ್ನು ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ʻಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ’ ವು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ‘ಆಗಸ್ಟ್ 13 ರಿಂದ 15 ರವರೆಗೆ ‘ಸ್ವಾಂತ್ರ್ಯೋತ್ಸವದ ಅಮೃತಮಹೋತ್ಸವದ’ದ ಅಡಿಯಲ್ಲಿ ‘ಹರ್ ಘರ್ ತಿರಂಗ’ ಎಂಬ ವಿಶೇಷ ಆಂದೋಲನವನ್ನು ಆಯೋಜಿಸಲಾಗಿದೆ. ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮತ್ತಷ್ಟು ವ್ಯಾಪಕವಾಗಿಸೋಣ ಎಂದರು.

ಅಮೃತ ಮಹೋತ್ಸವವು ಸಾಮೂಹಿಕ ಆಂದೋಲನದ ರೂಪ ಪಡೆಯುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಪ್ರಧಾನಿ ಹೇಳಿದರು.

ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದಾಗ, ನಾವೆಲ್ಲರೂ ಅದ್ಭುತ ಮತ್ತು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದೇವೆ ಎಂದು ಮೋದಿ ಹೇಳಿದರು.