ಮನೆ ರಾಜ್ಯ ಚಿತ್ರದುರ್ಗ: ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

ಚಿತ್ರದುರ್ಗ: ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

0

ಚಿತ್ರದುರ್ಗ(Chitradurga): ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಮುರುಘಾ ಮಠಕ್ಕೆ ಭೇಟಿ ನೀಡಿ,  ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದು ಮಾಠಾಧೀಶರೊಂದಿಗೆ ಸಂವಾದ ನಡೆಸಿದರು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 20ಕ್ಕೂ ಹೆಚ್ಚು ಮಠಾಧೀರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು ಜೊತೆಗೆ ಇದ್ದರು.

ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಬಂದರು. ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇತ್ತೀಚೆಗೆ ಮುರುಘಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು.