ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿ ದಾಟಿದೆ. 2136 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,12,522ಕ್ಕೆ ಏರಿಕೆಯಾಗಿದೆ.
ಇನ್ನೂ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,108ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1,845 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,61,187ಕ್ಕೆ ಏರಿಕೆಯಾಗಿದೆ. ಇನ್ನು 11185 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1,584 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,39,918ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ.