ಮನೆ ರಾಜಕೀಯ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

0

ಬೆಂಗಳೂರು(Bengaluru): ಇಂದು ಪಕ್ಷದ ಹಿರಿಯ ನಾಯಕ, ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಭೇಟಿ ಮಾಡಿದರು.

ಬೆಂಗಳೂರಿನಲ್ಲಿ ನಡೆಯಲ್ಲಿರುವ 3ನೇ ಆವೃತ್ತಿಯ ’ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಸಚಿವ ಅಮಿತ್ ಶಾ ರವರು ಬೆಂಗಳೂರಿಗೆ ಆಗಮಿಸಿದ್ದಾರೆ.

ದೇಶದಲ್ಲೇ ಅತಿ ದೊಡ್ಡ ಹಾಲಿನ ಘಟಕವೆಂದು ಖ್ಯಾತಿಗಳಿಸಿರುವ ಕರ್ನಾಟಕ ಹಾಲು ಒಕ್ಕೂಟ-ಕೆಎಂಎಫ್‌ಗೆ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ.