ಮನೆ ಸುದ್ದಿ ಜಾಲ ರಾಯಚೂರು: ಮಳೆಯ ನೀರಿನಲ್ಲಿ ಕೊಚ್ಚಿ ಹೋದ ರೈತ

ರಾಯಚೂರು: ಮಳೆಯ ನೀರಿನಲ್ಲಿ ಕೊಚ್ಚಿ ಹೋದ ರೈತ

0

ರಾಯಚೂರು(Raichur): ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಹಳ್ಳದ ನೀರಿನಲ್ಲಿ ರೈತ ಕೊಚ್ಚಿಕೊಂಡು ಹೋಗಿರುವ ಘಟನೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಕೊಚ್ಚಿ ಹೋದ ರೈತ ವೆಂಕಟೇಶ (36) ಎಂದು ಗುರುತಿಸಲಾಗಿದೆ.

ಜಮೀನು ಕೆಲಸಕ್ಕೆ ಹೋಗಿದ ರೈತ ಮರಳಿ ಸಂಜೆ ಮನಗೆ ಬರುವ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಮಾನ್ವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮಳೆಯಿಂದಾಗಿ ಜಿಲ್ಲೆಯ ಹಳ್ಳಗಳೆಲ್ಲ ನೀರಿನಿಂದ ಭರ್ತಿಯಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಅಲ್ಲಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.