ಮನೆ ರಾಜ್ಯ ರಾಜ್ಯದಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ  40,14,514ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 40111ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 2,107ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,63,294ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 11,067ಕ್ಕೆ ಏರಿಕೆಯಾಗಿದೆ. 

ಬೆಂಗಳೂರಿನಲ್ಲಿ 1,342 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,41,260 ಕ್ಕೆ ಏರಿಕೆಯಾಗಿದೆ.