ಮನೆ ರಾಜ್ಯ ಶ್ರೀ ಕ್ಷೇತ್ರ ಗೊರವನಹಳ್ಳಿ: ವಿಶೇಷ ಅಲಂಕಾರದಿಂದ ಕಂಗೊಳಿಸಲಿದ್ದಾಳೆ ಲಕ್ಷ್ಮೀ ದೇವಿ

ಶ್ರೀ ಕ್ಷೇತ್ರ ಗೊರವನಹಳ್ಳಿ: ವಿಶೇಷ ಅಲಂಕಾರದಿಂದ ಕಂಗೊಳಿಸಲಿದ್ದಾಳೆ ಲಕ್ಷ್ಮೀ ದೇವಿ

0

ತುಮಕೂರು (Tumakuru): ಲಕ್ಷ್ಮೀದೇವಿಗೆ ಇರುವ ಕರುನಾಡಿನ ಏಕೈಕ ಧಾರ್ಮಿಕ ಕ್ಷೇತ್ರ ಎಂಬ ಹಿರಿಮೆಗೆ ಸುಪ್ರಸಿದ್ಧ ಪುಣ್ಯಕ್ಷೇತ್ರ ಗೊರವನಹಳ್ಳಿಯ ಶ್ರೀಮಹಾಲಕ್ಷ್ಮೀ ಸನ್ನಿಧಾನ ಪಾತ್ರವಾಗಿದೆ. ಶ್ರಾವಣ ಮಾಸದ ಮೊದಲ ಹಬ್ಬವಾದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಾಲಕ್ಷ್ಮೀ ಪುಣ್ಯಕ್ಷೇತ್ರದಲ್ಲಿ ಸಂಭ್ರಮ-ಸಡಗರ ಮನೆ ಮಾಡಿದೆ.

ತುಮಕೂರಿನ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ಸನ್ನಿಧಾನದಲ್ಲಿ ಇಂದು ದೇವಿಗೆ ವಿಶೇಷ ಪೂಜೆ ಪುಸ್ಕಾರಗಳು ನಡೆಯಲಿದೆ. ಮುಂಜಾನೆಯಿಂದ ಸಂಜೆಯವರೆಗೆ ದೇವಿಗೆ ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿವೆ. ಗುರುವಾರದಿಂದಲೇ ದೇವಾಲಯ ಮತ್ತು ದೇವಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿದೆ. 

ಮಹಾಲಕ್ಷ್ಮೀ ದೇವಿಗೆ ಹೂವಿನ ಅಲಂಕಾರ ಮತ್ತು ಹೋಮ ಹವನ ಏರ್ಪಡಿಸಲಾಗಿದೆ. ದೇವಾಲಯಕ್ಕೆ ದೀಪಾಲಂಕಾರ ಮತ್ತು ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ. 

 ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುವ ನಿರೀಕ್ಷೆಯಿದೆ. ಮಹಾಲಕ್ಷ್ಮೀ ಟ್ರಸ್ಟ್‌ ಆಡಳಿತ ಮಂಡಳಿಯಿಂದ ಭಕ್ತರಿಗೆ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.