ಮನೆ ರಾಜಕೀಯ 2023ರಲ್ಲಿ ನಾನು ಮುಖ್ಯಮಂತ್ರಿಯಾಗುತ್ತೇನೆ: ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ

2023ರಲ್ಲಿ ನಾನು ಮುಖ್ಯಮಂತ್ರಿಯಾಗುತ್ತೇನೆ: ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ

0

ಚನ್ನಪಟ್ಟಣ(Channapattana): ಜನರ ಆಶೀರ್ವಾದ ಇದ್ದರೆ 2023ರಲ್ಲಿ ಮತ್ತೆ ನಾನು ಮುಖ್ಯಮಂತ್ರಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.‌

ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ವಸತಿ ಇಲಾಖೆ, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಇಲಾಖೆ, ರಾಜೀವ್‍ಗಾಂಧಿ ವಸತಿ ನಿಗಮದ ಸಹಯೋಗದಲ್ಲಿ ನಡೆದ ಎರಡನೇ ಹಂತದ ನಿವೇಶನಗಳ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಪಕ್ಷದ ಪಂಚರತ್ನ ಯೋಜನೆಗಳಲ್ಲಿ ಒಂದಾದ ‘ಜನತಾ ಜಲಧಾರೆ’ ಕಾರ್ಯಕ್ರಮ ರಾಜ್ಯದಲ್ಲಿ ಯಾತ್ರೆ ಮಾಡಿದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಪಂಚರತ್ನ ಯೋಜನೆಗಳಲ್ಲಿ ಒಂದಾದ ‘ಜನತಾ ಜಲಧಾರೆ’ ಕಾರ್ಯಕ್ರಮ ರಾಜ್ಯದಲ್ಲಿ ಯಾತ್ರೆ ಮಾಡಿದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣ, ಪ್ರತಿಗ್ರಾಮ ಪಂಚಾಯ್ತಿಯಲ್ಲಿ ಕರ್ನಾಟಕ ಪಬ್ಲಿಕ್ ಹೈಟೆಕ್ ಸರ್ಕಾರಿ ಶಾಲೆ ನಿರ್ಮಾಣ, ಪ್ರತಿ ಮನೆಗೆ ಆರೋಗ್ಯ ಸೇವೆ, ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗಾಗಿ ಹಲವಾರು ಯೋಜನೆ, ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಭರವಸೆ ಹಾಗೂ ಹಲವಾರು ಯೋಜನೆಗಳು ಈ ಪಂಚರತ್ನ ಯೋಜನೆಯಲ್ಲಿವೆ ಎಂದು ತಿಳಿಸಿದರು.