ಮನೆ ರಾಜ್ಯ ಕೊಡಗು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ: ನಾಳೆ ಶಾಲೆಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ: ನಾಳೆ ಶಾಲೆಗಳಿಗೆ ರಜೆ

0

ಮಡಿಕೇರಿ (Madikeri): ರಾಜ್ಯದ ಹಲವೆಡೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ಅಲ್ಲದೆ, ರೆಡ್‌ ಅಲರ್ಟ್‌ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಆಗಸ್ಟ್ 6ರಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಈ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.

ಶುಕ್ರವಾರವೂ ನಿರಂತರವಾಗಿ ಮಳೆ ಬೀಳುತ್ತಿದ್ದು, ಆತಂಕ ಮೂಡಿಸಿದೆ.