ಮನೆ ಅಪರಾಧ ಕರ್ತವ್ಯ ನಿರತ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಜಗನ್ನಾಥ್ ಹೃದಯಾಘಾತದಿಂದ ನಿಧನ

ಕರ್ತವ್ಯ ನಿರತ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಜಗನ್ನಾಥ್ ಹೃದಯಾಘಾತದಿಂದ ನಿಧನ

0

ಮಂಗಳೂರು(Mangalore): ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಕೊಣಾಜೆ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಜಗನ್ನಾಥ (44) ಅವರು ಶನಿವಾರ ನಿಧನರಾಗಿದ್ದಾರೆ.

ಜಗನ್ನಾಥ್ ಗೆ ಕರ್ತವ್ಯದ ವೇಳೆ ಎದೆನೋವು ಕಾಣಿಸಿಕೊಂಡಿದ್ದು,  ತಕ್ಷಣವೇ ಅವರನ್ನು ಕಣಚೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು ಎಂದು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ತಿಳಿಸಿದರು.

ಪುತ್ತೂರು ತಾಲ್ಲೂಕಿನ ಸವಣೂರು ಗ್ರಾಮದ ಜಗನ್ನಾಥ ಅವರು 2000ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದರು.

ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.