ಬರ್ಮಿಂಗ್ ಹ್ಯಾಮ್ (Birmingham): ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವನಿತೆಯರ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಎಡವಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ ತಂಡ 9 ರನ್ ಗಳ ವಿರೋಚಿತ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯ ತಂಡವು 8 ವಿಕೆಟಿಗೆ 161 ರನ್ ಗಳಿಸಿದ್ದರೆ ಭಾರತವು 19.3 ಓವರ್‌ಗಳಲ್ಲಿ 152 ರನ್ ಗಳಿಸಲಷ್ಟೇ ಶಕ್ತವಾಯಿತು.
ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಫೈನಲ್‌ನಲ್ಲಿ ಟಿ20 ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ರೋಚಕ ಪಂದ್ಯದಲ್ಲಿ ಭಾರತವನ್ನು 9 ರನ್‌ಗಳಿಂದ ಸೋಲಿಸಿತು. ಇದರೊಂದಿಗೆ ಆಸ್ಟ್ರೇಲಿಯಾ ಐತಿಹಾಸಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಆಸ್ಟ್ರೇಲಿಯಾ ವಿರುದ್ಧ ಸತತ ಎರಡನೇ ಬಾರಿ ಟಿ20 ಫೈನಲ್‌ನಲ್ಲಿ ಸೋತ ಭಾರತ ತಂಡ ಬೆಳ್ಳಿ ಪದಕ ಗೆದ್ದುಕೊಂಡಿತು.
ಇನ್ನು ಆಸ್ಚ್ರೇಲಿಯಾ ತಂಡ ಚಿನ್ನ ಗೆದ್ದರೆ, ಮೂರನೇ ಸ್ಥಾನ ಪಡೆದ ನ್ಯೂಜಿಲೆಂಡ್ ವನಿತೆಯರ ತಂಡ ಕಂಚಿನ ಪದಕ ಪಡೆಯಿತು.