ಮನೆ ಉದ್ಯೋಗ ಕೇಂದ್ರ ಸರ್ಕಾರದ ಬಿಐಎಸ್ನಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಬಿಐಎಸ್ನಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್    ಗ್ರಾಜುಯೇಟ್ ಇಂಜಿನಿಯರ್ (Graduate Engineer)  ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 100 ಹುದ್ದೆಗಳ ಭರ್ತಿಗೆ ನೇಮಕಾತಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಯನ್ನು ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 27 ಆಗಿದೆ.

ಈ ಹುದ್ದೆಗಳನ್ನು ಎರಡು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಿಇ ಅಥವಾ ಬಿಟೆಕ್, ಇಇಇ, ಎಫ್​ಸಿಟಿ, ಎಂಸಿಎಂನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ  27  ಗರಿಷ್ಠ 35 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

ಆಯ್ಕೆ ಪ್ರಕ್ರಿಯೆ: ಪ್ರಾಯೋಗಿಕ ಮೌಲ್ಯಮಾಪನ, ಲಿಖಿತ ಮೌಲ್ಯಮಾಪನ, ತಾಂತ್ರಿಕ ಜ್ಞಾನದ ಮೌಲ್ಯಮಾಪನ ಮತ್ತು ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06  ಆಗಸ್ಟ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಆಗಸ್ಟ್ 2022

ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ವೆಬ್‌ಸೈಟ್: bis.gov.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ