ಮನೆ ರಾಜ್ಯ ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ: ಬಿ.ಸಿ.ನಾಗೇಶ್

ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ: ಬಿ.ಸಿ.ನಾಗೇಶ್

0

ಬೆಂಗಳೂರು(Bengaluru):  ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ ಹಾಗೂ ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು,  ಮಾದರಿ ಶಾಲೆ, ಸ್ಪೋಕನ್ ಇಂಗ್ಲೀಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿದಂತೆ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಉಪಕ್ರಮಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವ ಗುರಿ ಇದೆ ಎಂದು ತಿಳಿಸಿದ್ದಾರೆ.

ಹಾಗೆಯೇ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನ, 15 ಸಾವಿರ ಶಿಕ್ಷಕರ ನೇಮಕ, ಶಾಲಾ- ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ, ಶಿಕ್ಷಕರ ಮುಂಬಡ್ತಿ ಹಾಗೂ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

ಶಾಲಾ ಶಿಕ್ಷಣ‌ ಮತ್ತು ಸಾಕ್ಷರತೆ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಭೌತಿಕ ತರಗತಿಗಳ ಆರಂಭ ಹಾಗೂ ಕಲಿಕಾ ನಷ್ಟ ಸರಿದೂಗಿಸಲು ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಯಿತು ಎಂದು ತಿಳಿಸಿದ್ದಾರೆ.