ಮನೆ ರಾಜ್ಯ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಆರ್.ಧ್ರುವನಾರಾಯಣ್ ಒತ್ತಾಯ

ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಆರ್.ಧ್ರುವನಾರಾಯಣ್ ಒತ್ತಾಯ

0

ಮೈಸೂರು(Mysuru): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಒತ್ತಾಯಿಸಿದರು.

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ‌ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ‘ಸ್ವಾತಂತ್ರ್ಯ ‌ನಡಿಗೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ‌ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರು ಬೇರೆ ಕಡೆ ಹೋಗುವುದು ಬೇಡ. ರಾಜಕೀಯವಾಗಿ ಬಲ ತುಂಬಿದ, ವಿಧಾನಸಭೆಯ ‌ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯನ್ನಾಗಿ ಮಾಡಿದ ಪುಣ್ಯಕ್ಷೇತ್ರವಿದು. ಇಲ್ಲಿಗೆ ಸಾವಿರಾರು‌ ಕೋಟಿ ರೂಪಾಯಿ ಅನುದಾನ ನೀಡಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಿದ್ದರು. ಆದ್ದರಿಂದ ಇಲ್ಲೇ ಇನ್ನೊಮ್ಮೆ ಸ್ಪರ್ಧಿಸಬೇಕು ಎಂದು ಧ್ರುವನಾರಾಯಣ ‌ಕೋರಿದರು.

ಇದಕ್ಕೆ ಶಿಳ್ಳೆ- ಚಪ್ಪಾಳೆಗಳ ಮೂಲಕ ಜನರು ಧ್ವನಿಗೂಡಿಸಿದರು.

ಹಾಲಿ ಶಾಸಕ  ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಇತರ ಗಣ್ಯರು ವೇದಿಕೆಯಲ್ಲಿದ್ದರು.