ಮನೆ ರಾಜ್ಯ ಮಳೆ ಹಿನ್ನೆಲೆ: ಹಾಸನ, ಬೆಳಗಾವಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಳೆ ಹಿನ್ನೆಲೆ: ಹಾಸನ, ಬೆಳಗಾವಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

0

ಹಾಸನ (Hassan): ಹಾಸನ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಹಾಸನ ತಹಶೀಲ್ದಾರ್ ಮತ್ತು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ತಹಸೀಲ್ದಾರ್ ಜೈಕುಮಾರ್ ಆದೇಶ ಹೊರಡಿಸಿದ್ದಾರೆ.

ಇನ್ನೂ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಬೆಳಗಾವಿ ತಾಲೂಕು ಹಾಗೂ ಖಾನಾಪುರ ತಾಲೂಕಿನ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಅದೇ ರೀತಿ ಬೆಳಗಾವಿ ಗ್ರಾಮೀಣ ಭಾಗದ ಒಂಬತ್ತು ಸರ್ಕಾರಿ ಶಾಲೆಗಳಿಗೂ ಸಹ ರಜೆ ಘೋಷಿಸಲಾಗಿದ್ದು, ಮಳೆ ಇದೇ ರೀತಿ ಮುಂದುವರೆದರೆ ನಾಳೆಯು ಶಾಲೆಗಳಿ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.