ಮನೆ ರಾಜ್ಯ ರಾಜ್ಯದಲ್ಲಿ 1680 ಮಂದಿಗೆ ಕೋವಿಡ್‌ ಸೋಂಕು

ರಾಜ್ಯದಲ್ಲಿ 1680 ಮಂದಿಗೆ ಕೋವಿಡ್‌ ಸೋಂಕು

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ  24 ಗಂಟೆಗಳಲ್ಲಿ 1,680 ಕೋವಿಡ್‌ ಹೊಸ ಪ್ರಕರಣ ಪತ್ತೆಯಾಗಿದ್ದು, ಸೋಂಕಿನಿಂದ ಒಂದೇ ದಿನ ಐವರು ಮೃತಪಟ್ಟಿದ್ದಾರೆ.

ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 40,24,394ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 40,128ಕ್ಕೆ ತಲುಪಿದೆ. ಸೋಂಕಿನಿಂದ 2,114 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಒಟ್ಟು 10,351 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 1,058 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 1,342 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಸದ್ಯ 7,049 ಸಕ್ರಿಯ ಪ್ರಕರಣಗಳಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 24,504 ಟೆಸ್ಟ್ ನಡೆಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.6.85ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ. 0.29 ರಷ್ಟಿದೆ.